
ಸುಮ್ಮನೆ ಕೆಲಸ ಮಾಡುತ್ತ ಕುಂತಾಗ ಎಲ್ಲಿಂದ ಬಂತೋ ಗೊತ್ತಿಲ್ಲ..ಅದರ ನೆನಪು !
ಬಂದು ಸುಮ್ಮನೆ ಹೋದರೆ ಚೆನ್ನಾರ್ಗಿತಿತ್ತು.ಆದರೆ ಪಾಪಿ ಅಮೇರಿಕಾಕ್ಕೆ ಹೋದರೂ ಪಾನಿಪುರಿ ನೆನಪು ತಪ್ಪಲಿಲ್ಲವಂತೆ !! ಅದರ ರುಚಿನೆನಪಿನಲ್ಲಿ ಪಟ್ಟ ಹಿಂಸೆಯನ್ನು ನಿಮ್ಮೊಂದಿಗೆ ಹಂಚಿಕೊಳ್ಳೋಣ ಅಂತ...
ಪಾನಿಪುರಿ ಅಂದ ಕೂಡಲೇ ಏನು ನೆನಪಿಗೆ ಬಂತು ರೀ?
ಸಣ್ಣ ಸಣ್ಣ ಪುರಿ,ಬಟಾಣಿಯಿಂದ ಕಟ್ಟಿದ ದುಂಡು ಒಡ್ಡು, ಅದರಲ್ಲಿ ಯಾವಾಗಲೂ ಹೊಗೆಯಾಡುತ್ತಿರುವ ಬಟಾಣಿ,'ಪಾನಿ' ಅಂತ ಕರೆಯಲ್ಪಡುವ ಆ ವಿಶಿಷ್ಟ ಮಸಾಲನೀರು ಹಾಗೂ ಆ ಪಾನಿಪುರಿ ತಳ್ಳುಗಾಡಿಗಳು..
ನನಗೆ ಅನಿಸಿದ ಹಾಗೆ ಪಾನಿಪುರಿದು ಬಹುಷಃ ರಾಜಸ್ತಾನಿ ಮೂಲ.ನಾನು ಚಿಕ್ಕವನಿದ್ದಾಗ ತಿಂದದ್ದು ಎಲ್ಲ ಈ ರಾಜಸ್ತಾನಿ ಪಾನಿಪುರಿ ಗಾಡಿಗಳಲ್ಲೆ.ಅದಕ್ಕೆನಾದರೂ ಅದು ರಾಜಸ್ತಾನಿ ಅಂದುಕೊಂಡಿರಬಹುದು.ಅದು ಎಲ್ಲಿದೇ ಇರಲಿ, ಎಷ್ಟು ಬೇಗ ಪ್ರಸಿದ್ದ ಆಯಿತು ಅಲ್ವ? ನಮ್ಮೂರಲ್ಲಿ ಮೊದಲಿದದ್ದು ೪-೫ ಪಾನಿಪುರಿ ಗಾಡಿಗಳು.ನೋಡು ನೋಡುಷ್ಟರಲ್ಲಿ ಪಾನಿಪುರಿ ಗಾಡಿಗಳು ಬೀದಿಗೊಂದರಂತೆ ಅದವು. ಸಂಜೆ ಗೆಳಯರ ಗುಂಪಿನಲ್ಲಿ ತಿರುಗಾಡಿ ಪಾನಿಪುರಿ ತಿಂದೆ ಮುಂದಿನ ಕೆಲಸ ಸಾಗುತಿತ್ತು. ಆದರೆ ಎಷ್ಟು ದಿನ ಇರುತ್ತೆ ಆ ಊರಿನ ಪಾನಿಪುರಿ ನಂಟು?
ಅಲ್ಲಿಂದ ನೆಗದದ್ದು ಬೆಂಗಳೂರೆಂಬ ನಗರಿಗೆ.ಮೊದಮೊದಲು ಕೆಲವೊಂದು ರಾತ್ರಿಗಳಿಗೆ ಪಾನಿಪುರಿ ಒಂದೇ ತಿಂದು ಜೀವಿಸಿದ್ದೂ ಆಯಿತು.ನಂತರ ಐಟಿಪಿಎಲ್ ಎಂಬ ಚಮಕ್ನಲ್ಲಿದ್ದ ೩ ವರ್ಷ ಅಲ್ಲಿದ್ದ ಇದ್ದಬದ್ದ ಪಾನಿಪುರಿ ಸೇವನೆ ಮಾಡಿದ್ದಾಯಿತು.ರುಚಿ ಬಗ್ಗೆ ಕೇಳೋಕ್ಕೆ ಹೋಗಬೇಡಿ.ಪಾನಿಪುರಿ ಸೇವನೆಗೆ ಜೊತೆ ಚೆನ್ನಾಗಿತ್ತು.ಅಷ್ಟು ಗೊತ್ತಾಗಲಿಲ್ಲ! ಅವಗಾವಗ ಮೇಯೋಹಾಲ್ ಹತ್ತಿರ ಹಾಗು ಸಿಎಂಹೆಚ್ ರೋಡ್ನಲ್ಲಿ ಸ್ವಾಹ ಆಗುತಿತ್ತು.
ಅನೇಕ ಹೋಟೆಲ್-ದರ್ಶಿನಿಗಳಲ್ಲಿ ನಾವೆಲ್ಲ ಪಾನಿಪುರಿ ತಿಂದಿರಬಹುದು, ಆದರೆ ತಳ್ಳುಗಾಡಿಯ ಪಾನಿಪುರಿಯ ರುಚಿಯ ಮುಂದೆ ಎಲ್ಲವೂ ಶೂನ್ಯ!
ಇದೇನು..ಆವಾಗಿಂದ ಪಾನಿಪುರಿ ಒಂದೇ ಆಯ್ತು, ಉಳಿದವು ಎಲ್ಲಿ ಅಂತೀರಾ..
ಪಾನಿಪುರಿ ಜೊತೆ ಸೇವ್ಪುರಿ,ಮಸಾಲಪುರಿ,ಬೇಲ್ಪುರಿ,ದಾಹಿಪುರಿಗಳ ಬಗ್ಗೆ ಹೇಳದಿದ್ದರೆ ಹೇಗೆ..ಒಂದೊಂದಕ್ಕೂ ಒಂದೊಂದು ವಿಶಿಷ್ಟ ರುಚಿ.ಅವುಗಳನ್ನು ಮಾಡೋದ ನೋಡೋದೇ ಚೆನ್ನಾ ! ಪುರಿಯನ್ನು ಮುರಿದು, ಅದರ ಮೇಲೆ ಆ ಬಟಾಣಿ ಮಿಶ್ರಣ ಹರಡಿ,ನಂತರ ಸೇವ್ ಅಥವಾ ಮೊಸರನ್ನೋ ಹಾಕಿ, ಉಪ್ಪು-ಮಸಾಲೆ ಉದುರಿಸುತ್ತಿದ್ದರೆ ..ಇಲ್ಲದಿರುವ ಎಲ್ಲಾ ಹಸಿವುಗಳು ಒಮ್ಮೆಗೆ ಪ್ರತ್ಯಕ್ಷ. ಬಾಯಿಯಲ್ಲಿ 'ಗಂಗೇಚಾ ಯಮೂನಾ' !!ಇನ್ನು ಬೇಲ್ಪುರಿಯಾದರೆ , ನೂರೆಂಟು ಮಸಾಲೆ,ಟಮೋಟ,ಮಂಡಕ್ಕಿ ಒಂದು ಪಾತ್ರೆಯಲ್ಲಿ ಹಾಕಿ ಆವನ್ನು ಸೌಟಿನಲ್ಲಿ ಕಲೆಸುತ್ತಿದ್ದರೆ..
ಈ ಎಲ್ಲ ಪುರಿಗಳನ್ನು ತಿಂದ ಮೇಲೆ ಪ್ರತ್ಯೇಕವಾಗಿ 'ಪಾನಿ' ಹಾಕಿಸಿಕೊಂಡು ಕುಡಿಯದಿದ್ದರೆ ಹೇಗೆ ?
ಇಲ್ಲಿಗೆ ಬಂದ ಮೇಲೆ ಮೊದಲ ಸಲ 'ಇಂಡಿಯನ್ ಶ್ಯಾಪ್' ನಲ್ಲಿ ಪಾನಿಪುರಿ ನೋಡಿದ್ದೆ , ಯಾವತ್ತು ಅದನ್ನು ನೋಡೇ ಇಲ್ಲ ಅನ್ನೋರ ತರ ಅದನ್ನು ನೋಡಿ, ೨ ಡಾಲರ್ ಕೊಟ್ಟು ತಗೊಂಡು ತಿಂದದ್ದಾಯಿತು.ಬೇಡ ಬೇಡವೆಂದರೂ ಇಲ್ಲಿನ ರುಚಿಯನ್ನು ಅಲ್ಲಿಗೆ ಹೋಲಿಸಿ ಕಷ್ಟಪಟ್ಟಿದ್ದೂ ಆಯಿತು ! ಸರಿ, ಮಾಡೋದೇನು ಅಂತ 'ಪಾಲಿಗೆ ಬಂದದ್ದು ಪಾನಿಪುರಿ' ಅಂತ ಸ್ವೀಕರಿಸಿದ್ದಾಯಿತು!!!
ಇಂದು ಇಲ್ಲಿ ಪಾನಿಪುರಿ ,ನಾಳೆ ಇನ್ನೇಲ್ಲೋ....
'ಪಾನಿಪುರಿ ಪುರಾಣ'ವನ್ನು ಈ ಒಂದು ಮಸಾಲಭರಿತ ಪದ್ಯದಿಂದ ಮುಗಿಸುತ್ತಿದ್ದೇನೆ.
ಪಾನಿಪುರಿ ಮಾಡೋನು ಬಟಾಣಿ,ಇರುಳ್ಳಿ,ಪಾನಿ ತುಂಬಿಸಿ,
ಪುರಿಯನ್ನು ಒಂದೊಂದೇ ಕೊಡುತ್ತಾ ಇದ್ದರೆ,
ಒಂದೇ ಗುಕ್ಕಿನಲ್ಲಿ ಅದನ್ನು ಬಾಯಿ ತುಂಬಾ ತುಂಬಿಸಿ,
ಹಾಗೆಯೇ ಕರಗಿಸಿ ಮೆಲ್ಲುತ್ತಿದ್ದರೆ ಸ್ವರ್ಗಕ್ಕೆ ಒಂದು ಪ್ಲೇಟ್ ಕಳುಹಿಸೆಂದ ಪಾನಿಪುರಿ ತಜ್ಞ
ವಿ.ಸೂ:ಇದೆಲ್ಲ ಓದಿದ ಮೇಲೆ ನೀವು ಪಾನಿಪುರಿ ಹುಡುಕಿಕೊಂಡು ಹೊರಟರೆ ನಾನು ಜವಾಬ್ದಾರನಲ್ಲ !!!